ವಿದ್ಯಾ ಸಿರಿ ವಿದ್ಯಾರ್ಥಿ ವೇತನ 2024.
ಇದರಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ವಿದ್ಯಾಸಿರಿ, ಊಟ ಮತ್ತು ವಸತಿ ಯೋಜನೆ ಹಾಗೂ ಮರುಪಾವತಿ ಯೋಜನೆಗಳಿಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಹೇಳಿದ ದಿನಾಂಕಗಳ ಬಗ್ಗೆ ವಿದ್ಯಾರ್ಥಿಗಳು ಅರ್ಜಿಯನ್ನ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಅರ್ಹತೆಗಳೇನು,? ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ
ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಈ ಯೋಜನೆಯನ್ನು ಪ್ರಾರಂಭಿಸಿದ್ದು, ಇದರಲ್ಲಿ ಅರ್ಜಿಯನ್ನು ಸಲ್ಲಿಸಿ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.
. ಆಧಾರ್ ಕಾರ್ಡ್
. ಆಧಾರ್ ಕಾರ್ಡ್ ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ.
. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ Email ID
. ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ನೊಂದಣಿ ಸಂಖ್ಯೆ.
. ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
. ವಿದ್ಯಾರ್ಥಿಯು ವಿಕಲಚೇತನರಾಗಿದ್ದರೆ ಸರ್ಕಾರ ನೀಡುವ UDID ಕಾರ್ಡ್ ನ ಸಂಖ್ಯೆ.
. ವಿದ್ಯಾರ್ಥಿಗಳ ವಾಸ ದೃಢೀಕರಣ ಪತ್ರ.
. ವಿದ್ಯಾರ್ಥಿಯ ಕಾಲೇಜು ದಾಖಲಾತಿಯ ನೊಂದಣಿ ಸಂಖ್ಯೆ.
. ವಿದ್ಯಾರ್ಥಿಯ ವಸತಿ ನಿಲಯದ ವಿವರಗಳು
ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ.
ಮೆಟ್ರಿಕ್ ನಂತರದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನಕ್ಕೆ ಬೇಕಾಗಿರುವ ಎಲ್ಲಾ ದಾಖಲಾತಿಗಳೊಂದಿಗೆ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನಿಗದಿ ಮಾಡಿದ ದಿನಾಂಕದೊಳಗೆ ಅರ್ಜಿಯನ್ನ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ
ಅಧಿಕೃತ ಜಾಲತಾಣ
https://bcwd.karnataka.gov.in/english
ಅರ್ಜಿ ಸಲ್ಲಿಸುವ ಲಿಂಕ್
https://ssp.postmatric.karnataka.gov.in/
ಅಗತ್ಯವಿದ್ದರೆ ಸಹಾಯವಾಣಿ ಸಂಖ್ಯೆ. 1902
. ಸಮಾಜ ಕಲ್ಯಾಣ ಇಲಾಖೆ
9482300400 /080 22634300
. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ
9482300400 /080 22634300
. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
8277799990
. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
8050770004 /8050770005
. ಕೃಷಿ ಇಲಾಖೆ
1800 -22371030